ವಾಲ್ಮೀಕಿ ಸಮುದಾಯದ ಕಡೆಗಣನೆ ಅಧಿಕಾರಿಗಳಿಗೆ ತರಾಟೆ

ಡೆಸ್ಕ್
1 Min Read

ಕೊರಟಗೆರೆ: ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ವಾಲ್ಮೀಕಿ ಸಮುದಾಯದ ಮುಖಂಡರು ತರಾಟೆ ತೆಗೆದುಕೊಂಡಿದ್ದಾರೆ.

ಅ.28 ರಂದು ನಡೆಯುವ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಗೈರು ಹಾಜರಾಗಿದ್ದರಿಂದ ಆಕ್ರೋಶಗೊಂಡ ಮುಖಂಡರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಪೂರ್ವಭಾವಿ ಮೊಟಕುಗೊಳಿಸಿ ಸಭೆಯಿಂದ ಹೊರನಡೆದರು.

ಈ ಸಭೆಗೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಾಗದೇ ಸಮುದಾಯವನ್ನು ಅವಮಾನಿಸುತ್ತಿದ್ದಾರೆ. ಅಧಿಕಾರಿಗಳು ಸಭೆಗೆ ಹಾಜರಾಗದೆ ತಮ್ಮ ಅಧೀನದಲ್ಲಿರುವ ಸಿಬ್ಬಂದಿಗಳನ್ನು ಸಭೆಗೆ ಕಳಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

10 ವರ್ಷಗಳಿಂದ ಹಳ್ಳಹಿಡಿದಿರುವ 1 ಕೋಟಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಳ್ಳ ಹಿಡಿದಿದೆ,ಕೊರಟಗೆರೆ ವಿಧಾನಸಭಾ ಕ್ಷೇತ್ರವು ಮೀಸಲು ಕ್ಷೇತ್ರವಾಗಿದ್ದು, ಇಂತಹ ಮೀಸಲು ಕ್ಷೇತ್ರದಲ್ಲಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಸಮುದಾಯವನ್ನು ಗೃಹಸಚಿವರ ಕ್ಷೇತ್ರದಲ್ಲೇ ಕಡೆಗಣಿಸುತ್ತಿದ್ದಾರೆ ಎಂದು ದೂರಿದರು.

ವಾಲ್ಮೀಕಿ ಭವನವನದ ಕಾಮಗಾರಿಯನ್ನು ಮಂದಗತಿಯಲ್ಲಿ ಸಾಗಿಸುತಗತಿರುವುದು ಶಾಸಕರ ಗಮನಕ್ಕೆ ಬರಬೇಕು. ಈಗಾಗಲೇ 55 ಲಕ್ಷ ಹಣ ಬಳಕೆಯಾಗಿದೆ. ಆದರೆ ಕಾಮಗಾರಿ ಪ್ರಗತಿಯಲ್ಲಿಲ್ಲ ಎಂದು ಮುಖಂಡ ಓಬಳರಾಜು ಆಕ್ರೋಶ ವ್ಯಕ್ತಪಡಿಸಿ ಹೊರನಡೆದರು.

Share this Article
Verified by MonsterInsights